ಬಜಕೂಡ್ಲಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ಬಜಕೂಡ್ಲು ಜೂ 07 : ಮಹಾಲಿಂಗೇಶ್ವರ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಬಜಕೂಡ್ಲು ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ಹೆಣ್ಮಕಜೆ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಬಜಕೂಡ್ಲು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಹಾಜರಿದ್ದರು.