ಕೇರಳ ಮುಖ್ಯಮಂತ್ರಿ ವಿ. ಡಿ ಸತೀಶನ್ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ – ಕುಡಿದ ಮತ್ತಿನಲ್ಲಿ ಕೃತ್ಯ

ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಅಜ್ಞಾತ ವ್ಯಕ್ತಿಯೊಬ್ಬ ತಿರುವನಂತಪುರದ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಬೆದರಿಕೆ ಹಾಕಿದ್ದನು. ತನಗೆ ಸತೀಶನ್ ಇಷ್ಟವಿಲ್ಲ ಎಂಬ ಕಾರಣವನ್ನು ಆರೋಪಿ ನೀಡಿದ್ದನು.
ಪೊಲೀಸರು ಫೋನ್ ಸಿಗ್ನಲ್ ಟ್ರ್ಯಾಕ್ ಮಾಡುವ ಮೂಲಕ ಆರೋಪಿಯನ್ನು ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ. ಆರೋಪಿಯು ಕರೆ ಮಾಡಿದ ಸಮಯದಲ್ಲಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯಲಿದೆ.
