ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ, ಮೃತಪಟ್ಟ 68,776 ಮಹಿಳೆಯರ ಖಾತೆಗಳಿಗೆ ಹಣ ಜಮೆಯಾಗಿರುವುದು ಪತ್ತೆಯಾಗಿದೆ.ಈ ರೀತಿಯಾಗಿ ಸುಮಾರು 79,75,66,000 ರೂಪಾಯಿಗಳಷ್ಟು ಸರ್ಕಾರಿ ಹಣ ಪೋಲಾಗಿರುವುದು ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹಣದ ದುರುಪಯೋಗವನ್ನು ತಡೆಯಲು ಸರ್ಕಾರ ಯೋಜನೆಯನ್ನು ಪರಿಷ್ಕರಿಸಲು ಮುಂದಾಗಿದೆ. ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಮತ್ತು ಹಂತ ಹಂತವಾಗಿ ಹಣವನ್ನು ವಾಪಸ್ ಪಡೆಯಲಾಗುತ್ತಿದೆ. ಒಟ್ಟು 92 ಬ್ಯಾಂಕ್ ಖಾತೆಗಳಿಗೆ ಮಹಿಳೆಯ ಮರಣದ ನಂತರವೂ ಹಣ ಪಾವತಿಯಾಗಿದೆ.
ಮೃತಪಟ್ಟ ಮಹಿಳೆಯರ ಖಾತೆಗೆ ಜಮೆಯಾದ ಹಣವನ್ನು ವಾಪಸ್ ಪಡೆಯುವ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಬ್ಯಾಂಕ್ ಆಡಳಿತ ಮಂಡಳಿಯವರು ಸಭೆ ನಡೆಸಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ಭಾನುವಾರ ರಾತ್ರಿ ಉಡುಪಿಯ ಐತಿಹಾಸಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಗುರೂಜಿಯೊಂದಿಗೆ ಆಗಮಿಸಿದ್ದ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು.
ಕೊಲ್ಲೂರು ಮೂಕಾಂಬಿಕೆಯ ದರ್ಶನದ ನಂತರ, ಅನಂತ್ ಅಂಬಾನಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೂ ಭೇಟಿ ನೀಡಿದರು. ಮಠದ ಆಡಳಿತ ಮಂಡಳಿಯಿಂದ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ ಅವರು, ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶೀರೂರು ಮಠದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ, ಬಿ ಎಲ್. ಎ 2 ಹಾಗೂ ಕಾರ್ಯಕರ್ತರ ವಿಶೇಷ ಸಭೆಯು ಇಂದು ಅಸೈಗೋಳಿ ಬಂಟರ ಭವನದಲ್ಲಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಉಸ್ತುವಾರಿಗಳಾದ ಶ್ರೀ ರಾಧಾಮೋಹನ್ ಅಗರ್ವಾವಾಲ್ ಗಣಉಪಸ್ಥಿತಿಯಲ್ಲಿ ವಿಶೇಷ ಸಭೆ ನಡೆಯಿತು.
ಸಭೆ ಪ್ರಾರಂಭದ ಮೊದಲು ವಂದೇ ಮಾತರಂ ಹಾಡಿ, ದೀಪ ಬೆಳಗಿಸಿ ಅತಿಥಿ ಗಣ್ಯರಿಂದ ತಾಯಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು ಬಿಜೆಪಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೈತ ಬೈಲ್ ಸ್ವಾಗತಿಸಿದರು,
ಬಿಜೆಪಿ ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ ವಕೀಲರಾದ ಮೋಹನ್ ರಾಜ್ ಕೆ ಆರ್ ಪ್ರಸ್ತಾವಿಕವಾಗಿ ಮಂಗಳೂರು ಮಂಡಲ ದ ಸಂಘಟನಾತ್ಮಕ ವಿಷಯಗಳ ಬಗ್ಗೆ ವರದಿ ಮಂಡಿಸಿದರು ಈ ಸಭೆಯ ವೇದಿಕೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಬಿಜೆಪಿ ರಾಜ್ಯ ಕಾರ್ಯದರ್ಶಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ವಿಧಾನ ಪರಿಷತ್ ಶಾಸಕರು ಕಿಶೋರ್ ಕುಮಾರ್ ಬೋಟ್ಯಾಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಮಂಗಳೂರು ಮಂಡಲದ ಪ್ರಭಾರಿ ಪೂಜಾ ಪೈ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ರವೀಂದ್ರ ಶೆಟ್ಟಿ ಉಳಿದೋಟ್ಟು, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ , ಜಿಲ್ಲಾ ಪ್ರಕೋಷ್ಟಗಳ ಸಂಚಾಲಕರು ಸುಧೀರ್ ಶೆಟ್ಟಿ ಕಣ್ಣೂರು ,ಮಂಗಳೂರು ಮಂಡಲದ ಬಿ ಎಲ್ ಎ-1 ಸಂಯೋಜಕರಾದ ಜಯ ಶ್ರೀ ಕರ್ಕೆರ, ಮಾಜಿ ಮಂತ್ರಿಗಳು ನಾಗರಾಜ ಶೆಟ್ಟಿ, ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರ ಶೇಖರ್ ಉಚ್ಚಿಲ ರಾಜ್ಯ ಮೀನುಗಾರ ಪ್ರಕೋಷ್ಟ ಸಹ ಸಂಚಾಲಕರು ಯಶವಂತ ಅಮೀನ್ , ಜಿಲ್ಲಾ ವಕ್ತಾರ ಜೀವನ್ ತೊಕ್ಕೊಟ್ಟು, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಹೇಮಂತ್ ಶೆಟ್ಟಿ ,ಹಿರಿಯ ಮುಖಂಡರುಗಳಾದ ಸೀತಾರಾಮ ಬಂಗೇರ ಟಿ ಜಿ ರಾಜಾರಾಮ್ ಭಟ್,ಜಿಲ್ಲಾ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಬಿ ಎಲ್ ಎ 2 ಗಳು ಹೆಚ್ಚಿನ ಸಂಖ್ಯೆ ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಮಂಗಳೂರು ಮಂಡಲದ ಉಪಾಧ್ಯಕ್ಷರು ಮನೋಜ್ ಆಚಾರ್ಯ ನಿರೂಪಿಸಿದರು. ಬಿಜೆಪಿ ಮಂಗಳೂರು ಮಂಡಲದ ಕಾರ್ಯದರ್ಶಿ ದಯಾನಂದ್ ತೊಕ್ಕೊಟ್ಟು ವಂದಿಸಿದರು