ಬೆಂಗಳೂರಿನಲ್ಲಿ ಗ್ಯಾಂಗ್ ನಿಂದ ರೌಡಿಶೀಟರ್ ಕೊಲೆ

ಬೆಂಗಳೂರು ಜೂ 7 : ರೌಡಿಶೀಟರ್ ನನ್ನು ಅಪರಿಚಿತ ಗುಂಪೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೊಲೆಯಾದ ರೌಡಿಶೀಟರ್ ನ ಹೆಸರು ಖಲೀಮ್ ಉಲ್ಲಾಖಾನ್ (36). ಈತ ಫೋನ್ನಲ್ಲಿ ಮಾತನಾಡುತ್ತಿದ್ದಾಗ ಅಪರಿಚಿತರ ಗುಂಪೊಂದು ಅಟ್ಟಾಡಿಸಿಕೊಂಡು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಹತ್ಯೆ ಮಾಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹೊಟ್ಟೆಯ ಭಾಗಕ್ಕೆ ಮಾರಕಾಸ್ತ್ರಗಳಿಂದ ಇಪ್ಪತ್ತಕ್ಕೂ ಹೆಚ್ಚು ಬಾರಿ ಇರಿದು ಹಲ್ಲೆ ಮಾಡಿ ಕೊಲೆಗೈದಿದ್ದಾರೆ.

ಹೊಸಕೋಟೆ ಸರಕಾರಿ ಆಸ್ಪತ್ರೆಗೆ ಮೃತ ದೇಹವನ್ನು ರವಾನಿಸಲಾಗಿದೆ. ಈ ಘಟನೆಯು ಸೂಲಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.