ಕರ್ನಾಟಕ ಸರಕಾರದಿಂದ ಮೃತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ, ಮೃತಪಟ್ಟ 68,776 ಮಹಿಳೆಯರ ಖಾತೆಗಳಿಗೆ ಹಣ ಜಮೆಯಾಗಿರುವುದು ಪತ್ತೆಯಾಗಿದೆ.ಈ ರೀತಿಯಾಗಿ ಸುಮಾರು 79,75,66,000 ರೂಪಾಯಿಗಳಷ್ಟು ಸರ್ಕಾರಿ ಹಣ ಪೋಲಾಗಿರುವುದು ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹಣದ ದುರುಪಯೋಗವನ್ನು ತಡೆಯಲು ಸರ್ಕಾರ ಯೋಜನೆಯನ್ನು ಪರಿಷ್ಕರಿಸಲು ಮುಂದಾಗಿದೆ. ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಮತ್ತು ಹಂತ ಹಂತವಾಗಿ ಹಣವನ್ನು ವಾಪಸ್ ಪಡೆಯಲಾಗುತ್ತಿದೆ. ಒಟ್ಟು 92 ಬ್ಯಾಂಕ್ ಖಾತೆಗಳಿಗೆ ಮಹಿಳೆಯ ಮರಣದ ನಂತರವೂ ಹಣ ಪಾವತಿಯಾಗಿದೆ.

ಮೃತಪಟ್ಟ ಮಹಿಳೆಯರ ಖಾತೆಗೆ ಜಮೆಯಾದ ಹಣವನ್ನು ವಾಪಸ್ ಪಡೆಯುವ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಬ್ಯಾಂಕ್ ಆಡಳಿತ ಮಂಡಳಿಯವರು ಸಭೆ ನಡೆಸಿದ್ದಾರೆ.