ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ

​ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಸಂದೇಶವು ಹುಸಿ (ನಕಲಿ) ಬೆದರಿಕೆ ಎಂದು ದೃಢಪಟ್ಟಿತು. ಇದರಿಂದ ಕೋರ್ಟ್ ನ ಸಿಬ್ಬಂದಿಗಳು ಹಾಗೂ ವಕೀಲರು ನಿರಾಳರಾದರು.
‘Kurunanidhi.kundi@underworld dog’ ಎಂಬ ಇಮೇಲ್ ವಿಳಾಸದಿಂದ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.


​ ಇಮೇಲ್ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ನ್ಯಾಯಾಲಯದ ಸಿಬ್ಬಂದಿ ಮತ್ತು ವಕೀಲರನ್ನು ಹೊರಗೆ ಕಳುಹಿಸಿ ಸುರಕ್ಷತಾ ಕ್ರಮ ಕೈಗೊಂಡರು. ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
​ ಬಾಂಬ್ ನಿಷ್ಕ್ರಿಯ ದಳವು ಸ್ಥಳದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿತು. ಯಾವುದೇ ಸ್ಫೋಟಕಗಳು ಪತ್ತೆಯಾಗದ ಕಾರಣ, ಇದು ಹುಸಿ ಬೆದರಿಕೆ ಎಂದು ಖಚಿತವಾಯಿತು.
ವಿಷಯ ಸ್ಪಷ್ಟವಾದ ನಂತರ, ನ್ಯಾಯಾಲಯದ ಸಿಬ್ಬಂದಿ ಮತ್ತು ವಕೀಲರು ಮತ್ತೆ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು.