ಜೂನ್ 28 ರಂದು ದೇಶಾದ್ಯಂತ ಪಲ್ಸ್ ಪೋಲಿಯೊ
ಕಾಸರಗೋಡು : ಜೂನ್ 28 ರಂದು ದೇಶಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ರೋಗದಿಂದ ಮುಕ್ತವಾಗಿಸಲು ಹಾಕಿಸಲಾಗುತ್ತದೆ. ರಾಜ್ಯದಲ್ಲಿ ಅಂದಾಜು 19000 ಮಕ್ಕಳಿಗೆ ಪೋಲಿಯೋ ಹಾಕಿಸುವ ಗುರಿಯನ್ನು ಸರಕಾರ ಹೊಂದಿದೆ.

ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು, ಅಂಗನವಾಡಿಗಳು, ಶಾಲೆಗಳು, ವಾಚನಾಲಯಗಳು, ಸ್ವಯಂಸೇವಾ ಸಂಸ್ಥೆಗಳ ಕಟ್ಟಡಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಅಲ್ಲದೆ, ಪ್ರಯಾಣದಲ್ಲಿರುವ ಮಕ್ಕಳಿಗಾಗಿ ಟ್ರಾನ್ಸಿಟ್, ಮೊಬೈಲ್ ಮತ್ತು ವಿಶೇಷ ಬೂತ್‌ಗಳನ್ನು ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಕ್ಕೆ ಕರೆತಂದು ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.





