ದಾವಣಗೆರೆಯಲ್ಲಿ ಜಿಹಾದಿ ಉಗ್ರಗಾಮಿ ಪತ್ತೆ : ಅಯೋಧ್ಯೆ ಮಂದಿರ ಸ್ಫೋಟಿಸಲು ಸಂಚು

ಫೋಟೋ ಕೃಪೆ : public tv

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಅನುಮಾನದೊಂದಿಗೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ, ಉತ್ತರ ಪ್ರದೇಶ ಮೂಲದ ಸುಹೇಲ್(20) ಎಂಬಾತನನ್ನು ದಾವಣಗೆರೆ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿವೆ.

  • ಬಂಧನ ಮತ್ತು ಹಿನ್ನೆಲೆ: ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದಾಗ ಆರೋಪಿಯನ್ನು ಬಂಧಿಸಲಾಗಿದ್ದು, ಈತ ಅಯೋಧ್ಯೆ ರಾಮಮಂದಿರವನ್ನು ಗುರಿಯಾಗಿಸುವ ಸಂಚು ಹೊಂದಿದ್ದ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ.
  • ವಿದೇಶಿ ಸಂಪರ್ಕ: ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಪಾಕಿಸ್ತಾನದ ಸಂಪರ್ಕಗಳು ಪತ್ತೆಯಾಗಿವೆ. ‘ರಾಣಾ ಭಾಯ್’ ಎಂಬ ಹೆಸರಿನಲ್ಲಿ ಪಾಕಿಸ್ತಾನದ ಕೋಡ್ (+92) ಹೊಂದಿರುವ ಸಂಖ್ಯೆಯನ್ನು ಸೇವ್ ಮಾಡಿಕೊಂಡಿದ್ದ ಹಾಗೂ ಸೋಷಿಯಲ್ ಮೀಡಿಯಾ ಮೂಲಕ ವಿದೇಶಿ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ.
  • ತನಿಖೆಯ ಪ್ರಗತಿ: ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು, ನಂತರ ಪ್ರಕರಣ ದಾಖಲಿಸಿ ಮುಂದಿನ ತನಿಖೆಗಾಗಿ ಹರಿಹರ ಗ್ರಾಮಾಂತರ ಠಾಣೆಗೆ ಕರೆತರಲಾಗಿದೆ. ಪ್ರಿಯಾಂಕ್ ಬರ್ಗೆ ಅವರು ಈತ ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದನ್ನು ದೃಢಪಡಿಸಿದ್ದಾರೆ.
  • ಇತರೆ ಸಾಕ್ಷ್ಯಗಳು: ಆನ್‌ಲೈನ್ ಗುಂಪುಗಳಲ್ಲಿ ಸಕ್ರಿಯವಾಗಿದ್ದ ಕುರಿತ ಮಾಹಿತಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ತೆಗೆಸಿಕೊಂಡ ಫೋಟೋಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ.
ಕರ್ನಾಟಕದ 7 ಜನ ಸಾಧಕರಿಗೆ ದೊರೆತ ಪದ್ಮಶ್ರೀ ಪ್ರಶಸ್ತಿ ಹಾಗೂ ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ

ಫೋಟೋ ಕೃಪೆ : The Indian Express

ರಾಷ್ಟ್ರಪತಿ ಭವನದಲ್ಲಿ ನಿನ್ನೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಹಾಗೂ ಪದ್ಮಭೂಷಣ ಪ್ರಶಸ್ತಿ ಯನ್ನು ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮುರವರು ನೀಡಿದರು. ಕರ್ನಾಟಕದ ಡಾ. ಪ್ರಭಾಕರ್ ಕೋರೆ, ಶಶಿ ಶೇಖರ್ ವೇಂಪತಿ ಡಾ. ಸುರೇಶ್ ಹನಗವಾಡಿ, ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಮತ್ತು ಉದ್ಯಮಿ ಟಿ.ಟಿ. ಜಗನ್ನಾಥನ್ ಅವರಿಗೆ ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಾಗೂ ಶತವಧಾನಿ ಆರ್ ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು.

  • ಡಾ. ಪ್ರಭಾಕರ ಕೋರೆ : ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಉಚಿತ ಅಥವಾ ಕಡಿಮೆ ವೆಚ್ಚದ ವೈದ್ಯಕೀಯ ಸೇವೆ ನೀಡುತ್ತಿದ್ದವರು
  • ಶಶಿ ಶೇಖರ್ ವೇಂಪತಿ: ದೂರದರ್ಶನ ಮತ್ತು ಆಕಾಶವಾಣಿಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಧುನೀಕರಿಸಿದ ತಂತ್ರಜ್ಞ ಇವರು. ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ‘ರಾಮಾಯಣ’ ಧಾರಾವಾಹಿಯನ್ನು ಪ್ರಸಾರ ಮಾಡಿ ಜಾಗತಿಕ ದಾಖಲೆ ಸೃಷ್ಟಿಸಿದ್ದಲ್ಲದೆ, ಕೋಟ್ಯಂತರ ವಿದ್ಯಾರ್ಥಿಗಳಿಗೆ ಉಚಿತವಾಗಿ ಟಿವಿ ಶಿಕ್ಷಣವನ್ನು ತಲುಪಿಸಿದ ಕೀರ್ತಿ ಇವರದ್ದು.
  • ಡಾ. ಸುರೇಶ್ ಹನಗವಾಡಿ: ಸ್ವತಃ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೂ, ಛಲ ಬಿಡದೆ ಹೋರಾಡಿದ ಕ್ರಾಂತಿಕಾರಿ ವೈದ್ಯರು ಇವರು. ದೇಶದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಲಭ್ಯವಾಗುವಂತೆ ಮಾಡುವಲ್ಲಿ ಇವರ ಪಾತ್ರ ದೊಡ್ಡದು.
  • ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್: ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಅಳವಡಿಸಲಾದ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿದ ಹೆಗ್ಗಳಿಕೆ ಇವರದು. ಅಲ್ಲದೆ, ‘ಅಗ್ನಿ’ ಕ್ಷಿಪಣಿಯಲ್ಲಿದ್ದ ತಾಂತ್ರಿಕ ದೋಷಗಳನ್ನು ನಿವಾರಿಸುವ ಮೂಲಕ ದೇಶದ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಿದ್ದಾರೆ.
  • ಶ್ರೀ ಟಿ.ಟಿ. ಜಗನ್ನಾಥನ್: ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಸಾಮ್ರಾಜ್ಯವನ್ನಾಗಿ ಬೆಳೆಸಿದ ಉದಾರ ಉದ್ಯಮಿ. ಕುಕ್ಕರ್ ಸ್ಫೋಟಗೊಳ್ಳುವುದನ್ನು ತಡೆಯುವ ತಂತ್ರಜ್ಞಾನವನ್ನು ಆವಿಷ್ಕರಿಸಿದ ಇವರು, ಜನರ ಜೀವ ರಕ್ಷಣೆಯ ದೃಷ್ಟಿಯಿಂದ ಅದರ ಪೇಟೆಂಟ್ ಹಕ್ಕನ್ನು ಇಡೀ ಉದ್ಯಮಕ್ಕೆ ಉಚಿತವಾಗಿ ಬಿಟ್ಟುಕೊಟ್ಟರು. ಇವರ ಈ ನಿಸ್ವಾರ್ಥ ಸೇವೆಗಾಗಿ ಮರಣೋತ್ತರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
  • ಅಂಕೇ ಗೌಡ ಎಂ : ಅವರು ಸಾಕ್ಷರತೆ ಮತ್ತು ಜ್ಞಾನದ ಸಾರ್ವಜನಿಕ ಪ್ರವೇಶಕ್ಕೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಕರ್ನಾಟಕದಲ್ಲಿ ಬಸ್ ಕಂಡಕ್ಟರ್ ಆಗಿದ್ದ ಗೌಡ ಅವರು, ಐದು ದಶಕಗಳಿಗೂ ಹೆಚ್ಚು ಕಾಲ ಶ್ರಮಿಸಿ, ಭಾರತದ ಅತಿದೊಡ್ಡ ಉಚಿತ ಗ್ರಂಥಾಲಯಗಳಲ್ಲಿ ಒಂದನ್ನು ನಿರ್ಮಿಸಿದ್ದಾರೆ.
  • ಎಸ್. ಜಿ ಸುಶೀಲಮ್ಮ : ಜಿ. ಸುಶೀಲಮ್ಮನವರು ಕಳೆದ 50 ವರ್ಷಗಳಿಂದ ಸಮಾಜದ ತಳಮಟ್ಟದ, ವಂಚಿತ ಜನರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಧಾರೆ ಎರೆದಿದ್ದಾರೆ. ಇವರ ನಿಸ್ವಾರ್ಥ ಸೇವೆಯ ಫಲವಾಗಿ ಇಂದು ಹೆಣ್ಣುಮಕ್ಕಳಿಗಾಗಿ ಕನ್ನಡ ಮಾಧ್ಯಮ ಶಾಲೆ, 18 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮಾಜದ ವಿವಿಧ ವರ್ಗಗಳ ಕಲ್ಯಾಣಕ್ಕಾಗಿ ಹತ್ತು ಹಲವು ಯಶಸ್ವಿ ಕಾರ್ಯಕ್ರಮಗಳು ನಿರಂತರವಾಗಿ ನಡೆದುಕೊಂಡು ಬರುತ್ತಿವೆ.
  • ಶತಾವಧಾನಿ ಡಾ. ಆರ್. ಗಣೇಶ್ : ಅವರಿಗೆ ಸಾಹಿತ್ಯಿಕ ಸೌಂದರ್ಯಶಾಸ್ತ್ರ, ಛಂದಸ್ಸು ಮತ್ತು ಅವಧಾನ ಎಂಬ ಶಾಸ್ತ್ರೀಯ ಭಾರತೀಯ ಕಲಾ ಪ್ರಕಾರದ ಸಂರಕ್ಷಣೆಗೆ ನೀಡಿದ ಅಸಾಧಾರಣ ಕೊಡುಗೆಗಾಗಿ ‘ಪದ್ಮಭೂಷಣ 2026’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಅವರು ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ 1,300ಕ್ಕೂ ಹೆಚ್ಚು ಅಷ್ಟಾವಧಾನಗಳನ್ನು ಮತ್ತು 5 ಶತಾವಧಾನಗಳನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ, ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಎಪ್ಪತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.
ಚಿಕ್ಕಮಗಳೂರು : ಹುಡುಗಿ ನಾಪತ್ತೆ ಪ್ರಕರಣ. ಸ್ನೇಹಿತ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕೂಡ್ಲು ಗ್ರಾಮ ದಲ್ಲಿ ಯುವತಿ ಒಬ್ಬಳು ಪ್ರಿಯಕರನೊಂದಿಗೆ ಓಡಿ ಹೋಗಿದ್ದು, ಆಕೆಯ ತಂದೆ ಅವಳ ಸ್ನೇಹಿತನಿಗೆ ಈ ವಿಷಯದಲ್ಲಿ ಬೈದು ವಿಚಾರಿಸಿದ್ದಾರೆ. ಇದರಿಂದ ಮನನೊಂದ ಆಕೆಯ ಸ್ನೇಹಿತ ಚಂದನ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜೂನ್ 14 ರಂದು ಅದೇ ಗ್ರಾಮದ 18 ವರ್ಷದ ಯುವತಿ ಪತ್ರ ಬರೆದಿಟ್ಟು ತನ್ನ ಪ್ರಿಯಕರನೊಂದಿಗೆ ಹೋಗಿದ್ದಳು. ಆದರೆ ಆಕೆಯ ತಂದೆ ಚಂದನ್ ಗೆ ಇದಕ್ಕೆ ನೀನೆ ಕಾರಣ… ಆಕೆ ಎಲ್ಲಿ ಇದ್ದಾಳೆ ಎಂದು ಹೇಳು ಎಂದು ಜಗಳವಾಡಿದ್ದರು.

ಇದರ ಬಗ್ಗೆ ತನಿಖೆ ಶುರು ಮಾಡಿದ ಬೀರೂರು ಪೊಲೀಸರು ಕಾಲ್ ನ ಆಧಾರದ ಮೇಲೆ ಜೂನ್ 21 ಕ್ಕೆ ಚಂದನ್ ನನ್ನು ಕರೆಸಿ ವಿಚಾರಣೆ ಮಾಡಿ ಕಳುಹಿಸಿದ್ದರು. ಆ ದಿನ ಮನೆಗೆ ಹೋದ ಚಂದನ್ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಇದರ ಬಗ್ಗೆ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡಿದರು. ಹುಡುಗನ ಸಾವಿಗೆ ನ್ಯಾಯ ಸಿಗಬೇಕೆಂದು ಮನವಿ ಮಾಡಿದರು. ಈ ಬಗ್ಗೆ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಡುಗನ ಸಾವು ಹಾಗೂ ಹುಡುಗಿಯ ನಾಪತ್ತೆಯ ಬಗ್ಗೆ ವಿಷಯ ಹೊರಬರಬೇಕಿದೆ.

​ಬಿಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ

​ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಆರ್‌ಎಸ್‌ಎಸ್‌ನವರು ಧೈರ್ಯವಿಲ್ಲದ ಪುಕ್ಕಲರು ಎಂದು ಟೀಕಿಸಿದ ಅವರು, ನಾವು ಮೌನವಾಗಿರುವುದರಿಂದಲೇ ಅವರು ಅತಿಯಾಗಿ ವರ್ತಿಸುತ್ತಿದ್ದಾರೆ ಎಂದು ಹರಿಪ್ರಸಾದ್ ಕಿಡಿಕಾರಿದರು.

​ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇತರ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು .2028ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2029ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕುರಿತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

​ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಗುರಿಯೊಂದಿಗೆ, ಬಿಕೆ ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್ ಅವರ ಜೋಡಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ರಣತಂತ್ರ ರೂಪಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಪದಗ್ರಹಣವು ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಶಕೆ ಆರಂಭವಾಗುವ ಮುನ್ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಅವರ ನಾಯಕತ್ವ ಯಾವ ರೀತಿಯ ಪ್ರಭಾವ ಬೀರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ : ಹಿಂದೂ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ

ಮೈಸೂರು ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಪತ್ತೇಯಾದ ಸುಮಾರು 40ಕ್ಕೂ ಹೆಚ್ಚು ಬಾಂಗ್ಲಾ ವಲಸಿಗರನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇವರು ಕೊಲ್ಕತ್ತಾದಿಂದ ಹೊರಡುವ ಹೌರಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಮೈಸೂರಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ರೈಲು ನಿಲ್ದಾಣದಲ್ಲಿ ಕಾರ್ಯಕರ್ತರು ಅವರ ಗುರುತಿನ ಚೀಟಿ ಮತ್ತು ದಾಖಲೆಗಳನ್ನು ಪರಿಶೀಲಿಸಿದಾಗ, ಕೆಲವೊಂದು ದಾಖಲೆಗಳು ನಕಲಿ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಹೆಚ್ಚಿನವರ ಬಳಿ ಪಶ್ಚಿಮ ಬಂಗಾಳದ ಗುರುತಿನ ಚೀಟಿಗಳು ಕಂಡುಬಂದಿವೆ. ವಿಚಾರಣೆ ವೇಳೆ, ತಲಾ ಒಬ್ಬೊಬ್ಬರು ಒಂದೊಂದು ರೀತಿಯ ಕಾರಣಗಳನ್ನು ನೀಡುತ್ತಿರುವುದು ಅನುಮಾನವನ್ನು ಹೆಚ್ಚಿಸಿದೆ. ಕೆಲವರು ಕೆಲಸ ಹುಡುಕಿಕೊಂಡು ಬಂದಿದ್ದೇವೆ ಎಂದು ಹೇಳಿದರೆ, ಇನ್ನು ಕೆಲವರು ಬೇರೆಯದೇ ಕಾರಣಗಳನ್ನು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಇವರು ಮೈಸೂರಿನಿಂದ ಕೇರಳ ಮತ್ತು ಮಡಿಕೇರಿಗೆ ಹೋಗುವ ಉದ್ದೇಶ ಹೊಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಬಂದು ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳೀಯ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳು ವಲಸಿಗರ ದಾಖಲೆಗಳು, ಗುರುತು ಮತ್ತು ಅವರ ಪ್ರಯಾಣದ ಉದ್ದೇಶದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ದಾರುಣ ಘಟನೆ: ಮಾಜಿ ಯೋಧನ ಕೊಲೆ, ಮಗಳ ಕೃತ್ಯಕ್ಕೆ ತಾಯಿ ಆತ್ಮಹತ್ಯೆ

​ಬೆಳಗಾವಿಯಲ್ಲಿ ನಡೆದ ಮಾಜಿ ಸೈನಿಕ ಸಂದೀಪ್ ಮಂಜರಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ತನ್ನ ಮಗಳು ಸುಮಾ ಮಂಜರಗಿ, ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಕೃತ್ಯದಿಂದ ತೀವ್ರ ಮನನೊಂದಿದ್ದ ಆಕೆಯ ತಾಯಿ ಮಹಾದೇವಿ (57), ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

​ಮಗಳು ಮಾಡಿರುವ ಹೀನಾಯ ಕೃತ್ಯ ಹಾಗೂ ಆಕೆಯ ಬಂಧನದಿಂದ ಕಂಗಾಲಾಗಿದ್ದ ಮಹಾದೇವಿ ಅವರು, ಸಮಾಜದಲ್ಲಿನ ಮರ್ಯಾದೆಗೆ ಅಂಜಿ ಮತ್ತು ತೀವ್ರ ಮಾನಸಿಕ ಆಘಾತದಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ:

ಮಾಜಿ ಯೋಧ ಸಂದೀಪ್ ಮಂಜರಗಿ ಅವರ ಹೆಸರಿನಲ್ಲಿದ್ದ ಎಚ್‌ಡಿಎಫ್‌ಸಿ (HDFC) ಮತ್ತು ಎಸ್‌ಬಿಐ (SBI) ವಿಮಾ ಪಾಲಿಸಿಗಳ ಮೇಲೆ ಕಣ್ಣಿಟ್ಟಿದ್ದ ಪತ್ನಿ ಸುಮಾ, ಅಪಘಾತದ ನೆಪದಲ್ಲಿ ಆತನನ್ನು ಕೊಲ್ಲಲು ಸಂಚು ರೂಪಿಸಿದ್ದಳು. ಪತಿ ಮೃತಪಟ್ಟರೆ ಸಿಗುವ ಎರಡು ಕೋಟಿ ರೂಪಾಯಿಗಳ ಆಸೆಗಾಗಿ, ಪ್ರಿಯಕರ ಮತ್ತು ಇತರರ ಸಹಾಯದಿಂದ ಈ ಕೃತ್ಯ ಎಸಗಿದ್ದಳು.

​ಆರಂಭದಲ್ಲಿ ಈ ಸಾವನ್ನು ಅಪಘಾತ ಎಂದು ನಂಬಿಸಲು ಆರೋಪಿಗಳು ಪ್ರಯತ್ನಿಸಿದ್ದರು. ಆದರೆ, ತನಿಖೆ ನಡೆಸಿದ ಪೊಲೀಸರು ಪ್ರಕರಣದ ನಿಗೂಢತೆಯನ್ನು ಭೇದಿಸಿ, ಸುಮಾಳನ್ನು ಆಕೆಯ ಪ್ರಿಯಕರ ಮತ್ತು ಕೆಲ ಸರ್ಕಾರಿ ನೌಕರರು ಸೇರಿದಂತೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಈ ಪ್ರಕರಣವು ತಾಯಿಯ ಆತ್ಮಹತ್ಯೆಯೊಂದಿಗೆ ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ.

ಬೆಂಗಳೂರು : ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ, ಮೆಟ್ರೋ ರೈಲುಗಳ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಯಿತು. ಹಸಿರು ಮಾರ್ಗದಲ್ಲಿರುವ ನಾಗಸಂದ್ರ ನಿಲ್ದಾಣದ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಮತ್ತು ಮೆಟ್ರೋ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು. ಈ ಘಟನೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು.

​ಸದ್ಯಕ್ಕೆ ಈ ಅವಘಡಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಅಧಿಕಾರಿಗಳು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಈ ವಿಷಯದ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮವು ಶೀಘ್ರವೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದೆ.

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ

​ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಸಂದೇಶವು ಹುಸಿ (ನಕಲಿ) ಬೆದರಿಕೆ ಎಂದು ದೃಢಪಟ್ಟಿತು. ಇದರಿಂದ ಕೋರ್ಟ್ ನ ಸಿಬ್ಬಂದಿಗಳು ಹಾಗೂ ವಕೀಲರು ನಿರಾಳರಾದರು.
‘Kurunanidhi.kundi@underworld dog’ ಎಂಬ ಇಮೇಲ್ ವಿಳಾಸದಿಂದ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.


​ ಇಮೇಲ್ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ನ್ಯಾಯಾಲಯದ ಸಿಬ್ಬಂದಿ ಮತ್ತು ವಕೀಲರನ್ನು ಹೊರಗೆ ಕಳುಹಿಸಿ ಸುರಕ್ಷತಾ ಕ್ರಮ ಕೈಗೊಂಡರು. ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
​ ಬಾಂಬ್ ನಿಷ್ಕ್ರಿಯ ದಳವು ಸ್ಥಳದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿತು. ಯಾವುದೇ ಸ್ಫೋಟಕಗಳು ಪತ್ತೆಯಾಗದ ಕಾರಣ, ಇದು ಹುಸಿ ಬೆದರಿಕೆ ಎಂದು ಖಚಿತವಾಯಿತು.
ವಿಷಯ ಸ್ಪಷ್ಟವಾದ ನಂತರ, ನ್ಯಾಯಾಲಯದ ಸಿಬ್ಬಂದಿ ಮತ್ತು ವಕೀಲರು ಮತ್ತೆ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು.

ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು: ಜೂನ್ ಅಂತ್ಯಕ್ಕೆ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು ಮತ್ತು ಮಂಗಳೂರು ನಡುವಿನ ವಂದೇ ಭಾರತ್ ರೈಲು ಸಂಪರ್ಕಕ್ಕೆ ಇದ್ದ ತಾಂತ್ರಿಕ ಅಡಚಣೆಗಳು ನಿವಾರಣೆಯಾಗುತ್ತಿವೆ. ಇದರಿಂದಾಗಿ ಕರಾವಳಿ ಹಾಗೂ ರಾಜ್ಯ ರಾಜಧಾನಿಗೆ ಇರುವ ಹೈಸ್ಪೀಡ್ ರೈಲು ಸಂಪರ್ಕದ ಕನಸು ನನಸಾಗಲಿದೆ. ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆಯ ಸವಾಲಿನ 55 ಕಿಮೀ ಘಾಟ್ ವಿಭಾಗದಲ್ಲಿ ಜೂನ್ ಅಂತ್ಯದೊಳಗೆ ಪ್ರಾಯೋಗಿಕ ಸಂಚಾರ (Trial Run) ನಡೆಯಲಿದೆ.
ಘಾಟಿ ವಿಭಾಗದಲ್ಲಿ ರೈಲಿನ ವೇಗವನ್ನು ಗಂಟೆಗೆ 30 ಕಿ.ಮೀಗೆ ಸೀಮಿತಗೊಳಿಸಿರುವುದರಿಂದ, ಸುರಕ್ಷತೆಗಾಗಿ ವಂದೇ ಭಾರತ್ ರೈಲಿಗೆ ‘ಸ್ವಯಂಚಾಲಿತ ತುರ್ತು ಬ್ರೇಕಿಂಗ್’ (AEB) ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಈ ವಿಶೇಷ ರೇಕ್ ಸಿದ್ಧವಾಗಿದ್ದು, ಶೀಘ್ರವೇ ಕರ್ನಾಟಕಕ್ಕೆ ಆಗಮಿಸಲಿದೆ.


ರೈಲ್ವೆ ಸಚಿವಾಲಯದ ಆರ್‌ಡಿಎಸ್‌ಒ (RDSO) ಈ ಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆ ಯಶಸ್ವಿಯಾದರೆ ಬೆಂಗಳೂರು-ಮಂಗಳೂರು ನಡುವಿನ ವೇಗದ ಮತ್ತು ಆರಾಮದಾಯಕ ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಿಗಲಿದೆ.
​ ಈ ಮಾರ್ಗದ ವಿದ್ಯುದೀಕರಣ ಕಾರ್ಯವು ಈಗಾಗಲೇ ಡಿಸೆಂಬರ್ 2025ರಲ್ಲಿ ಪೂರ್ಣಗೊಂಡಿದ್ದು, ವಂದೇ ಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಬಾಕಿ ಇದೆ. ಇದಕ್ಕಾಗಿ ಎಇಬಿ ವ್ಯವಸ್ಥೆ ಹೊಂದಿರುವ ವಿಶೇಷ ರೇಕ್ ಸಿದ್ಧವಾಗುತ್ತಿದೆ ಜೂನ್ ಎರಡನೇ ವಾರದಿಂದ ಆರಂಭವಾದ ಈ ಪರೀಕ್ಷೆಗಳಲ್ಲಿ 5 ದಿನಗಳ 5 ಟ್ರಿಪ್‌ಗಳನ್ನು ನಡೆಸಲಾಗಿದ್ದು, ಎಲ್ಲಾ ತಾಂತ್ರಿಕ ಮಾನದಂಡಗಳನ್ನು ಪೂರೈಸಲಾಗಿದೆ. ಪ್ರಾಯೋಗಿಕ ಸಂಚಾರಗಳ ನಂತರ ಕರಾವಳಿಯ ಜನರಿಗೆ ವಂದೇ ಭಾರತ್ ರೈಲಿನ ಸೇವೆ ದೊರೆಯುವ ನಿರೀಕ್ಷೆಯಿದೆ.
​ ಈ ರೈಲು ಮಾರ್ಗವು ಆರಂಭವಾದರೆ ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರಿನ ನಡುವಿನ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ

ಹೊಮ್ ಸ್ಟೇಗಳಿಗೆ ಶಾಸನಬದ್ಧ ನೀತಿ ರೂಪಿಸಬೇಕು : ಹೈಕೋರ್ಟ್ ಸೂಚನೆ

ಕರ್ನಾಟಕದ ಹಲವೆಡೆಗಳಲ್ಲಿ ಹೋಂಸ್ಟೇಗಳ ಸ್ಥಾಪನೆ, ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಸಮಗ್ರ ನೀತಿ ಹಾಗೂ ಶಾಸನಬದ್ಧ ನಿಯಂತ್ರಣ ಚೌಕಟ್ಟನ್ನು ರೂಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೋಂಸ್ಟೇಗಳು ಕೇವಲ ವಾಣಿಜ್ಯ ಸಂಸ್ಥೆಗಳಲ್ಲದೆ, ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಸ್ಥಳಗಳಾಗಿರುವುದರಿಂದ ಅಲ್ಲಿನ ಸುರಕ್ಷತೆ, ಶುಚಿತ್ವ ಮತ್ತು ಗ್ರಾಹಕ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೊತೆಗೆ, ಸಣ್ಣ ಮತ್ತು ದೊಡ್ಡ ಹೋಂಸ್ಟೇಗಳ ನಡುವೆ ಸ್ಪಷ್ಟ ವರ್ಗೀಕರಣ ಮಾಡಬೇಕೆಂದು ಹಾಗೂ ಅಗ್ನಿ ಸುರಕ್ಷತೆ, ಆಹಾರ ಸ್ವಚ್ಛತೆ ಸೇರಿದಂತೆ ಹಲವು ಮಾನದಂಡಗಳನ್ನು ರೂಪಿಸುವಂತೆ ಸೂಚಿಸಿದೆ. ಹೋಮ್ ಸ್ಟೇ ಪರವಾನಗಿ ರದ್ದು ಮಾಡುವ ಮೊದಲು ಅರ್ಜಿದಾರರಿಗೆ ನೋಟೀಸ್ ನೀಡುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಅದನ್ನು ಶೋಕಾಸ್ ನೋಟೀಸ್ ಎಂದು ಪರಿಗಣಿಸಿ ಉತ್ತರಿಸಲು ಅವಕಾಶ ನೀಡಲಾಗುವುದು.