ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಶುರುವಾದ ಎರಡೇ ದಿನಕ್ಕೆ ಕರ್ನಾಟಕದಲ್ಲಿ ಮಳೆಗಾಲ ಆರಂಭವಾಗಿದೆ. ಎಲ್ಲಾ ರಾಜ್ಯಗಳಲ್ಲೂ ಮುಂಗಾರು ಕಾಲಿಟ್ಟಿದೆ.
ಕೇರಳದ ಕೊಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಶಾಲಾ ಕಾಲೇಜುಗಳು ಹಾಗೂ ಇದರ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಉಳಿದ ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. 24 ಗಂಟೆಗಳಲ್ಲಿ ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆಯಿಂದಾಗಿ ನೀರಿನ ಮೂಲಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಪ್ರವಾಸೋದ್ಯಮಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಹಾಗೂ ಎಚ್ಚರಿಕೆ ವಹಿಸಲಾಗಿದೆ. ಹಾಗೂ ನದಿಗಳಲ್ಲಿ, ಸಮುದ್ರಗಳಲ್ಲಿ ಮೀನುಗಾರಿಕೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ
ಬೆಂಗಳೂರು ಜೂ 8 : ಸರಕಾರಿ ಉದ್ಯೋಗದ ಆಮಿಷವೊಡ್ಡಿ ನಿರುದ್ಯೋಗಿ ಯುವಕರಿಂದ ಕೋಟ್ಯಂತರ ರೂ. ವಸೂಲಿ ಮಾಡುತ್ತಿದ್ದ ತಂದೆ-ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗ ಕೊಡಿಸುವ ಹೆಸರಿನಲ್ಲಿ ನಕಲಿ ತರಬೇತಿ ಕೇಂದ್ರಗಳನ್ನು ನಡೆಸಿ, ನಕಲಿ ನೇಮಕಾತಿ ಪತ್ರಗಳ ಮೂಲಕ ಸುಮಾರು 5.30 ಕೋಟಿ ರೂ. ವಂಚಿಸಿದ್ದ ಶಂಶಾದ್ ಬೇಗಂ ಮತ್ತು ಮನ್ಸೂರ್ ಅಹಮದ್ ಬಂಧನವಾಗಿದೆ. ಕೆಲಸದ ಭರವಸೆ ನೀಡಿ ತರಬೇತಿ ಹೆಸರಿನಲ್ಲಿ ಹಣ ಪೀಕುತ್ತಿದ್ದ ಅಪ್ಪ-ಮಗಳ ಖತರ್ನಾಕ್ ಜಾಲಕ್ಕೆ ಬಲಿಯಾದ ಹಲವರು, ಕೆಲಸಕ್ಕೆಂದು ತೆರಳಿದಾಗ ಮೋಸ ಹೋಗಿರುವುದು ದೃಢಪಟ್ಟಿದೆ.
ಸಂತ್ರಸ್ತರಿಂದ ದೂರು ದಾಖಲಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ಬರುವ ಮಧ್ಯವರ್ತಿಗಳ ನಂಬಿ ಹಣ ಕಳೆದುಕೊಳ್ಳಬೇಡಿ ಎಂದು ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಸಿದೆ.
ಹಿಂದೂ ಜಾಗರಣ ವೇದಿಕೆ, ಕರ್ನಾಟಕ, ದಕ್ಷಿಣ ನೇತೃತ್ವದಲ್ಲಿ ಎರಡು ದಿನಗಳ ಕಾಲ ಅಂದರೆ, ಜೂನ್ 6,7 ರಂದು ಶಿವಮೊಗ್ಗ ಜಿಲ್ಲೆಯ ಆರ್ಯವೈಶ್ಯ ಸಂಸ್ಕೃತಿ ಸದನ, ಶಿವಮೊಗ್ಗ ಇಲ್ಲಿ ಪ್ರಾಂತ ಯೋಜನಾ ಬೈಠಕ್ ನಡೆಯಿತು. ಬೈಠಕಿನಲ್ಲಿ ಅಖಿಲಾ ಭಾರತದ ಪ್ರತಿನಿಧಿಗಳು, ಪ್ರತಿನಿಧಿಗಳು, ದಕ್ಷಿಣ ಪ್ರಾಂತದ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.
ಸಮಾರೋಪದಲ್ಲಿ ಅಖಿಲ ಭಾರತ ಟೋಳಿ ಸದಸ್ಯರಾದ ಜಗದೀಶ್ ಕಾರಂತ್ ಮತ್ತು ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂಗಾರು ಶುರುವಾಗಿದೆ. ಮಳೆಯ ಆರ್ಭಟ ಜೋರಾಗುತ್ತಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆಗಾಲ ಶುರುವಾಗಿದೆ. ಹಾಗೂ ಜನ ಪರದಾಡುತ್ತಿದ್ದಾರೆ.
ಜಿಲ್ಲೆಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇದರ ಜೊತೆಗೆ ರಾಜ್ಯದ 7 ಜಿಲ್ಲೆಗೆ ಆರೆಂಜ್ ಅಲರ್ಟ್ ಮತ್ತು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕ ಮಂಗಳೂರು, ಕೊಡಗು, ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಹಾಸನ , ತುಮಕೂರು, ಚಿಕ್ಕ ಬಳ್ಳಾಪುರ, ಗದಗ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಖಾತೆ ಹಂಚಿಕೆಯ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರೆಡ್ಡಿ ನಡುವೆ ನಡೆದ ತಡರಾತ್ರಿಯ ಸುದೀರ್ಘ ಸಂಧಾನ ಸಭೆಯು ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ರಾತ್ರಿ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ರಾಮಲಿಂಗಾ ರೆಡ್ಡಿ ಅವರ ನಡುವಿನ ಸುಮಾರು ಎರಡೂವರೆ ಗಂಟೆಗಳ ಸುದೀರ್ಘ ಸಭೆ, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾತ್ರಿ 11 ಗಂಟೆಗೆ ಆರಂಭವಾಗಿ ಮುಂಜಾನೆ 1.30ರವರೆಗೆ ನಡೆದ ಈ ಸಭೆ, ಹೈಕಮಾಂಡ್ ಸೂಚನೆಯ ಮೇರೆಗೆ ನಡೆದ ಸಂಧಾನ ಎನ್ನಲಾಗುತ್ತಿದೆ.
ಏನಿದು ವಿವಾದ? ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನೀಡಬೇಕೆಂಬ ಬೇಡಿಕೆಯನ್ನು ರಾಮಲಿಂಗಾ ರೆಡ್ಡಿ ಪ್ರಬಲವಾಗಿ ಮುಂದಿಟ್ಟಿದ್ದರು. ಈ ಖಾತೆ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಟ್ಟು ಹಿಡಿದಿದ್ದ ಅವರು, ಈ ಹಿಂದೆ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಅವರು ತಮಗೆ ನೀಡಿದ್ದ ಭರವಸೆಯನ್ನು ಬಹಿರಂಗವಾಗಿ ನೆನಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ ಡಿ.ಕೆ. ಶಿವಕುಮಾರ್, ಖಾತೆ ಬದಲಾವಣೆಯ ಅಧಿಕಾರ ಹೈಕಮಾಂಡ್‌ಗೆ ಸೇರಿದ್ದು ಎಂದು ಸ್ಪಷ್ಟಪಡಿಸಿದ್ದರು.
ಸಂಧಾನದ ನಂತರದ ಪ್ರತಿಕ್ರಿಯೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, “ನಾವೆಲ್ಲರೂ ಹಳೆಯ ಸ್ನೇಹಿತರು, ಎಲ್ಲವನ್ನೂ ಕುಳಿತು ಚರ್ಚಿಸಿ ಬಗೆಹರಿಸಿಕೊಂಡಿದ್ದೇವೆ. ಯಾವುದೇ ಆತಂಕ ಬೇಡ,” ಎಂದು ತಿಳಿಸಿದರು. ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಪಡೆದಿರುವ ಕುರಿತಾದ ಪ್ರಶ್ನೆಗೆ ನೇರ ಉತ್ತರ ನೀಡಲು ನಿರಾಕರಿಸಿದರು. ಸಚಿವ ರಾಮಲಿಂಗಾ ರೆಡ್ಡಿ ಕೂಡ “ಸಿಎಂ ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ, ಎಲ್ಲ ಗೊಂದಲಗಳು ನಿವಾರಣೆಯಾಗಿವೆ,” ಎಂದು ಹೇಳಿ ಹೆಚ್ಚಿನ ಪ್ರತಿಕ್ರಿಯೆ ನೀಡದೆ ತೆರಳಿದರು.
ಹೆಚ್ಚಿದ ಆತಂಕ ಈ ಬೆಳವಣಿಗೆಯ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ ಪಕ್ಷದೊಳಗೆ ಇನ್ನೂ ಮೂವರು ನಾಯಕರು ಅಸಮಾಧಾನಿತರಾಗಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಮತ್ತೊಂದೆಡೆ ಹಿರಿಯ ಸಚಿವ ಎಚ್.ಕೆ. ಪಾಟೀಲ್, ಈ ವಿದ್ಯಮಾನವನ್ನು ಸರ್ಕಾರದ ಪಾಲಿನ ‘ಎಚ್ಚರಿಕೆಯ ಗಂಟೆ’ ಎಂದು ಕರೆದಿದ್ದಾರೆ. ಸಂಧಾನ ಯಶಸ್ವಿಯಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದರೂ, ಸಚಿವ ರಾಮಲಿಂಗಾ ರೆಡ್ಡಿ ಅಧಿಕೃತವಾಗಿ ರಾಜೀನಾಮೆ ವಾಪಸ್ ಪಡೆಯುವರೇ ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಅಸಮಾಧಾನ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಸದ್ಯದ ಚರ್ಚೆಯ ವಿಷಯವಾಗಿದೆ.
ಬೆಂಗಳೂರು, ಜೂನ್ 4 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್. ಕೆ ಅತೀಕ್ ಅವರನ್ನು ನೇಮಕ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಅಧಿಕೃತ ಅಧಿಸೂಚನೆಯೊಂದನ್ನು ಹೊರಡಿಸಿದ್ದು, ಈ ಹೊಸ ಹುದ್ದೆಗೆ ಮುಖ್ಯ ಕಾರ್ಯದರ್ಶಿಗೆ ಸಮಾನವಾದ ವೇತನ ಮತ್ತು ಸೌಲಭ್ಯಗಳನ್ನು ನಿಗದಿಪಡಿಸಿದೆ. ಪ್ರಸ್ತುತ ಬೆಂಗಳೂರು ಬಿಸಿನೆಸ್ ಕಾರಿಡಾರ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ 1991 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅತೀಕ್ ಅವರು, ಈ ಹೊಸ ಜವಾಬ್ದಾರಿಯನ್ನು ತಮ್ಮ ಪ್ರಸ್ತುತ ಹುದ್ದೆಯೊಂದಿಗೆ ಏಕಕಾಲದಲ್ಲಿ ನಿರ್ವಹಿಸಲಿದ್ದಾರೆ.
ಅತೀಕ್ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಉನ್ನತ ಹುದ್ದೆಗಳಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ (PMO) ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ವಾಷಿಂಗ್ಟನ್ ಡಿಸಿಯ ವಿಶ್ವ ಬ್ಯಾಂಕ್ ಗುಂಪಿನ ಮಂಡಳಿಯಲ್ಲಿ ಭಾರತದ ಪ್ರತಿನಿಧಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ ಮತ್ತು ಆಡಳಿತ ಸುಧಾರಣಾ ಕ್ಷೇತ್ರಗಳಲ್ಲಿ ನಾಯಕತ್ವದ ಪಾತ್ರ ವಹಿಸಿದ್ದಾರೆ. ಅಲ್ಲದೆ, ಶಿಕ್ಷಣ, ಆರೋಗ್ಯ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಅನೇಕ ಪ್ರಮುಖ ರಾಷ್ಟ್ರೀಯ ಉಪಕ್ರಮಗಳನ್ನು ರೂಪಿಸುವಲ್ಲಿ ಇವರ ಪಾತ್ರ ಹಿರಿದು.
ವಿವಿಧ ಸರ್ಕಾರಿ ನಿಗಮಗಳ ಮಂಡಳಿಯಲ್ಲಿ ಸದಸ್ಯರಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ.